ಬಿಜೆಪಿ ಬಿಟ್ಟು ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ
Update: 2023-03-31 10:43 GMT
ಬೆಂಗಳೂರು,ಮಾ.31: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಶುಕ್ರವಾರ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಹಿಂದೆ ಜೆಡಿಎಸ್ ಪಕ್ಷದಿಂದ ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಪಕ್ಷವನ್ನು ಸೇರಿದ್ದರು.
ಇದೀಗ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಜೆಡಿಎಸ್‌ಗೆ ಮರಳಿದ್ದಾರೆ. ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಮನೆಯಲ್ಲೇ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.