ಬಿಟಿಎಂ ಲೇಔಟ್ ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಿಲ್ ಶೆಟ್ಟಿ ಮನೆಯಲ್ಲಿ 504 ಕುಕ್ಕರ್ ಜಪ್ತಿ: ಪ್ರಕರಣ ದಾಖಲು
Update: 2023-04-01 08:14 GMT
ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ, ಟಿಕೆಟ್ ಆಕಾಂಕ್ಷಿ ಅನಿಲ್ ಶೆಟ್ಟಿ ವಿರುದ್ಧ ಅಕ್ರಮವಾಗಿ ಕುಕ್ಕರ್ಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರದ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಆರ್ಐ ದಾಖಲು ಮಾಡಲಾಗಿದೆ.
ಖಚಿತ ಮಾಹಿತಿ ಮೇರೆಗೆ ಅನಿಲ್ ಶೆಟ್ಟಿ ಮನೆ ಮೇಲೆ ಚುನಾವಣಾಧಿಕಾರಿ ತಂಡ ದಾಳಿ ಮಾಡಿದ್ದು, 504 ಕುಕ್ಕರ್ ಜಪ್ತಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿ ವರಲಕ್ಷ್ಮಮ್ಮ ದೂರು ನೀಡಿದ್ದರು. ನ್ಯಾಯಾಲಯದ ಅನುಮತಿ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.