ನಾಳೆ (ಎ.5) ಸುದೀಪ್‌ ಬಿಜೆಪಿಗೆ ಸೇರ್ಪಡೆ?

Update: 2023-04-04 18:27 GMT

ಬೆಂಗಳೂರು: ಕನ್ನಡದ ಖ್ಯಾತ ನಟ ಸುದೀಪ್‌ ಅವರು ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದಾರೆಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. 

ಎಪ್ರಿಲ್‌ 5 ರಂದು ಮಧ್ಯಾಹ್ನ 1:30 ಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸುದೀಪ್‌ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಚರ್ಚೆಯಾಗುತ್ತಿದೆ. 

ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಪ್ರತ್ಯೇಕ ಸುದ್ದಿಗೋಷ್ಠಿಗಳನ್ನು ಆಯೋಜಿಸಿದ್ದು, ನಟ ದರ್ಶನ್ ಕೂಡಾ ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿಯೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಆದರೆ, ದರ್ಶನ್ ಅಥವಾ ಬಿಜೆಪಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. 

Similar News