ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ: ಅಭ್ಯರ್ಥಿಗಳಿಗೆ ಶುಭ ಹಾರೈಸಿದ ಡಿಕೆಶಿ

Update: 2023-04-06 10:38 GMT

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್, ಬಾಕಿ ಉಳಿದಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. 

ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, 'ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ಪಟ್ಟಿ ಹೀಗಿದೆ... ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ' ಎಂದು ಬರೆದುಕೊಂಡಿದ್ದಾರೆ. 

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ.10 ರಂದು (ಬುಧವಾರ)  ಒಂದೇ ಹಂತದ ಮತದಾನ ಹಾಗೂ ಮೇ.13ರಂದು (ಶನಿವಾರ) ಮತ ಎಣಿಕೆ ನಡೆಯಲಿದೆ.

Similar News