ಉಡುಪಿ ಜಿಲ್ಲೆ: ಪ್ರಾರ್ಥನೆ, ಧ್ಯಾನದೊಂದಿಗೆ ಗುಡ್‌ಫ್ರೈಡೆ ಆಚರಣೆ

Update: 2023-04-07 13:32 GMT

ಉಡುಪಿ : ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾ ದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ಜರುಗಿತು.

ಧರ್ಮಪ್ರಾಂತದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ. ಜೆರಾಲ್ಢ್ ಐಸಾಕ್ ಲೋಬೊ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. 

ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ.ಜೋಯ್ ಅಂದ್ರಾದೆ, ಪಿಲಾರ್ ಸಭೆಯ ವಂ.ಡೆನ್ಜಿಲ್ ಮಾರ್ಟಿಸ್, ವಂ.ನಿತೇಶ್ ಡಿ’ಸೋಜ ಉಪಸ್ಥಿತರಿದ್ದರು.
ಜಿಲ್ಲೆಯ ಕೆಲವು ಚರ್ಚುಗಳಲ್ಲಿ ಯೇಸುಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆ ಗಳನ್ನು ಪ್ರಸ್ತುತಪಡಿಸಲಾಯಿತು.

ಚರ್ಚಿನಲ್ಲಿ ಧರ್ಮಗುರುಗಳು ರಕ್ತವರ್ಣದ ಪೂಜಾ ಬಟ್ಟೆಯನ್ನು ಧರಿಸಿ ಯೇಸುಕ್ರಿಸ್ತನ ಕೊನೆಯ ಗಳಿಗೆಗಳ ವೃತ್ತಾಂತ ಓದಿದರು. ಬಳಿಕ ಶಿಲುಬೆಯನ್ನು ಮೆರವಣಿಗೆಯಲ್ಲಿ ತಂದು ಭಕ್ತರು ಮುತ್ತಿಟ್ಟು ತಮ್ಮ ೪೦ ದಿನಗಳ ತ್ಯಾಗದ ಉಳಿಕೆಯ ಹಣವನ್ನು ಬಡಬಗ್ಗರಿಗಾಗಿ ನೀಡಿದರು.

Similar News