ಬೆಂಗಳೂರು: ದಂಪತಿ ಆತ್ಮಹತ್ಯೆ

Update: 2023-04-07 17:49 GMT

ಬೆಂಗಳೂರು, ಎ.7: ಕೌಟುಂಬಿಕ ಕಲಹದ ಕಾರಣಕ್ಕಾಗಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚೊಕ್ಕಸಂದ್ರದ ಮನೆಯೊಂದರಲ್ಲಿ ವಾಸವಾಗಿದ್ದ ತುಮಕೂರು ಮೂಲದ ಜಗದೀಶ್(37), ನಂದಿನಿ (40) ಆತ್ಮಹತ್ಯೆಗೆ ಶರಣಾದ ದಂಪತಿ ಎಂದು ತಿಳಿದುಬಂದಿದೆ.

ದಂಪತಿ ಮೂಲತಃ ತುಮಕೂರಿನವರಾಗಿದ್ದು, ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಜಗದೀಶ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ನಂದಿನಿ ಗಾಮೆರ್ಂಟ್ಸ್ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗುರುವಾರ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Similar News