ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ
Update: 2023-04-12 10:07 GMT
ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬುಧವಾರ ಬಿಜೆಪಿ ಪಕ್ಷ ಸೇರ್ಪಡೆಯಾದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಪಕ್ಷ ಸೇರ್ಪಡೆಗೂ ಮುನ್ನ ಯಡಿಯೂರಪ್ಪ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದ ರಾಜನಂದಿನಿ ಕೆಲಕಾಲ ಮಾತುಕತೆ ನಡೆಸಿದ್ದರು.