ವಿಠಲ ಸಪಲ್ಯ ವಿಟ್ಲ
Update: 2023-04-16 17:06 GMT
ಬಂಟ್ವಾಳ : ಇಲ್ಲಿನ ವಿಟ್ಲ ಸಮೀಪದ ಕೂಜಪಾಡಿ ನಿವಾಸಿ, ಪ್ರಗತಿಪರ ಕೃಷಿಕ ವಿಠಲ ಸಪಲ್ಯ ವಿಟ್ಲ (81) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಿಗ್ಗೆ ನಿಧನರಾದರು.
ಮೃತರು ಪತ್ನಿ, ಪೊಲೀಸ್ ಕಾನ್ಸ್ ಟೇಬಲ್ ಪ್ರವೀಣ್ ಸಹಿತ ಇಬ್ಬರು ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ.
ಮೃತರು ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯಾಗಿ, ವಿಟ್ಲ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಹಿರಿಯ ಸದಸ್ಯರಾಗಿ, ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕರಾಗಿ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.