ಮಹದೇವಪುರ: ಹಾಲಿ ಶಾಸಕ ಅರವಿಂದ ಲಿಂಬಾವಳಿ ಪತ್ನಿಗೆ ಬಿಜೆಪಿ ಟಿಕೆಟ್

Update: 2023-04-17 14:22 GMT

ಬೆಂಗಳೂರು, ಎ. 17: ವಿಧಾನಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಂಗಳೂರು ಕೇಂದ್ರ ಜಿಲ್ಲೆಯ ವ್ಯಾಪ್ತಿಗೆ ಬರುವ ಮಹದೇವಪುರ (SC) ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅರವಿಂದ ಲಿಂಬಾವಳಿ ಗೆ ಟಿಕೆಟ್ ಕೈ ತಪ್ಪಿದೆ. 

ಇಲ್ಲಿ ಅರವಿಂದ ಲಿಂಬಾವಳಿ ಬದಲಿಗೆ, ಅವರ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿಗೆ ಟಿಕೆಟ್ ನೀಡಲಾಗಿದೆ. 

ಬಿಜೆಪಿಯ ಮೊದಲ ಹಾಗೂ 2ನೇ ಪಟ್ಟಿಯಲ್ಲಿ ಅರವಿಂದ ಲಿಂಬಾವಳಿಯವರ ಹೆಸರನ್ನು ಕೈಬಿಡಲಾಗಿತ್ತು. ಅರವಿಂದ ಲಿಂಬಾವಳಿ ವಿರುದ್ಧ ಕೆಲ ಆರೋಪಗಳಿರುವ ಹಿನ್ನೆಲೆ ಅವರ ಬದಲಿಗೆ, ಪತ್ನಿ ಮಂಜುಳಾ ಲಿಂಬಾವಳಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯ 3ನೇ ಪಟ್ಟಿಯಲ್ಲಿ ಎಲ್ಲಾ 12 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮ ಆಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ, 3ನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾತ್ರ ಬಿಜೆಪಿ ಪ್ರಕಟಿಸಿದ್ದು, ಇನ್ನೂ 2 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

Similar News