ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್‍ಐಆರ್

Update: 2023-04-24 11:08 GMT

ಬೆಂಗಳೂರು, ಎ.24: ಚುನಾವಣಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. 

ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ನಿನ್ನೆ ಶ್ರೀನಿವಾಸ್ ಅವರು ಸಭೆ ನಡೆಸುತ್ತಿದ್ದ ವೇಳೆ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ದಾಳಿ ವೇಳೆ ಸಹಕರಿಸದೇ ಎಸ್‍ಟಿಎಫ್ ಅಧಿಕಾರಿಗಳ ವಿರುದ್ಧ ವಾಗ್ವಾದ ಮಾಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Similar News