ಮೇ 3ರಂದು ದ.ಕ., ಉಡುಪಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಚುನಾವಣೆ ಪ್ರಚಾರ

Update: 2023-04-24 16:43 GMT

ಮಂಗಳೂರು, ಎ.24: ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ತಿಳಿಸಿದ್ದಾರೆ.

ನಗರದ ಲಾಲ್ ಭಾಗ್ ನಲ್ಲಿರುವ ಬಿಜೆಪಿ ಚುನಾವಣಾ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಎಪ್ರಿಲ್ 25 ಮತ್ತು 26ರಂದು ಕರ್ನಾಟಕ ರಾಜ್ಯದಾದ್ಯಂತ ಮಹಾ ಪ್ರಚಾರ ಅಭಿಯಾನ ನಡೆಸಲಾಗುವುದು. ಏಕಕಾಲದಲ್ಲಿ 224 ಕ್ಷೇತ್ರಗಳಲ್ಲಿ ನಡೆಯುವ ಅಭಿಯಾನದಲ್ಲಿ 98 ಮಂದಿ ಕೇಂದ್ರ ನಾಯಕರು, 150 ರಾಜ್ಯ ನಾಯಕರು ಭಾಗವಹಿಸುತ್ತಾರೆ. ಜೆಪಿ ನಡ್ಡಾ, ಅಮಿತ್ ಷಾ, ರಾಜನಾಥ್ ಸಿಂಗ್, ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮನ್ ಸುಖ್ ಮಾಂಡವೀಯ, ಕೆ.ಅಣ್ಣಾಮಲೈ, ಆದಿತ್ಯನಾಥ್, ದೇವೇಂದ್ರ ಫಡ್ನವಿಸ್, ಸ್ಮೃತಿ ಇರಾನಿ ಮತ್ತಿತರರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ 6ರಂದು ಆದಿತ್ಯನಾಥ್ ದಕ್ಷಿಣ ಕನ್ನಡ ಜಿಲ್ಲೆಗೆ ಬರಲಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪದಾಧಿಕಾರಿಗಳಾದ ಜಗದೀಶ್ ಶೇಣವ, ರಾಧಾಕೃಷ್ಣ, ಸಂಜಯ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

Similar News