ರ‍್ಯಾಂಕ್ ವಿಜೇತೆ ಸಹಿತ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
Update: 2023-04-25 13:06 GMT
ಶಿರ್ವ, ಎ.25: ಉಡುಪಿ ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟ ಇನ್ನಂಜೆ ಎಸ್‌ವಿಎಚ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 593 ಅಂಕಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್ ಗಳಿಸಿದ ಅನುಶ್ರೀ ಅವರನ್ನು ಉಡುಪಿ ಸೋದೆ ವಾದಿರಾಜ ಮಠದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸೋದೆ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ ನಿಶಾನ್ ಕೊಟ್ಯಾನ್, ತೃತೀಯ ಸ್ಥಾನ ಗಳಿಸಿದ ಖುಷಿ, ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ ಸಾಕ್ಷಿ ಕುಲಾಲ್, ಯಾತಿಕಾ ಅಮೀನ್, ದ್ವಿತೀಯ ಸ್ಥಾನಗಳಿಸಿದ ಶ್ರೀಲೇಖಾರವರನ್ನು ಅವರನ್ನು ಕೂಡ ಸನ್ಮಾನಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಪುಂಡರೀಕಾಕ್ಷ ಕೊಡಂಚ, ಉಪನ್ಯಾಸಕ ಪ್ರಶಾಂತ್ ಉಪಸ್ಥಿತರಿದ್ದರು.