ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಧಾರಾಕಾರ ಮಳೆ
Update: 2023-04-25 13:41 GMT
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಂಗಳವಾರ ಒಂದು ಗಂಟೆಗೂ ಅಧಿಕ ಸಮಯ ಧಾರಾಕಾರ ಮಳೆ ಸುರಿದಿದೆ.
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಅಕ್ಕ ಪಕ್ಕದ ಪರಿಸರದಲ್ಲಿ ಮಂಗಳವಾರ ಅಪರಾಹ್ನ ಒಂದು ಗಂಟೆಗೂ ಅಧಿಕ ಸಮಯ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಯಿತು.
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲಮೊಗ್ರು ಕಲ್ಮಕಾರು, ಹರಿಹರ ಪಲ್ಲತ್ತಡ್ಕ, ಐನೆಕಿದು, ಗುತ್ತಿಗಾರು, ಬಳ್ಪ, ಯೇನೆಕಲ್ಲು, ಕೈಕಂಬ, ಪಂಜ ಸೇರಿದಂತೆ ಕೆಲವೆಡೆ ಉತ್ತಮ ಮಳೆಯಾಗಿದೆ. ಸುಳ್ಯದಲ್ಲಿ ಮಂಗಳವಾರ ಮಧ್ಯಾಹ್ನ ವೇಳೆ ಕೇವಲ ಐದು ನಿಮಿಷದ ಹನಿ ಮಳೆಯಾಗಿದ್ದು, ಬಳಿಕ ಮೋಡ ಕವಿದ ವಾತವರಣ ಕಂಡುಬಂದಿದೆ.