ಉಡುಪಿ: ಅಭ್ಯರ್ಥಿಗಳು, ಏಜೆಂಟ್‌ರಿಗೆ ಚುನಾವಣಾ ವೀಕ್ಷಕರ ಸೂಚನೆ
Update: 2023-04-25 20:44 IST
ಉಡುಪಿ: ಮೇ 10ರ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಯಲ್ಲಿರುವ ಅಭ್ಯರ್ಥಿಗಳು ಹಾಗೂ ಏಜೆಂಟರ್‌ಗಳ ಸಭೆಯು ವೆಚ್ಚ ವೀಕ್ಷಕ ರಾದ ಅಂಕಿತ್ ಸೋಮನಿ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.
ಸಭೆಯಲ್ಲಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮ ಖರ್ಚು ವೆಚ್ಚಗಳ ಕುರಿತ ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸುವಂತೆ ವೀಕ್ಷಕರು ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ, ಸಹಾಯಕ ಚುನಾವಣಾಧಿಕಾರಿ ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮತ್ತವರ ಏಜೆಂಟರ್‌ಗಳು ಉಪಸ್ಥಿತರಿದ್ದರು.
ಇದೇ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ವೀಕ್ಷಕರಾದ ತುಕಾರಾಂ ಹರಿಬಾವು ಮುಂಡೆ ಸೋಮವಾರ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ, ಸಹಾಯಕ ಚುನಾವಣಾ ಧಿಕಾರಿಗಳು ಉಪಸ್ಥಿತರಿದ್ದರು.