ಬ್ರಹಾವರ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ
Update: 2023-04-26 11:50 GMT
ಬ್ರಹ್ಮಾವರ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು, ಜಿಪಂ ಮಾಜಿ ಸದಸ್ಯ ಸುಧಾಕರ ಶೆಟ್ಟಿ ಮೈರ್ಮಾಡಿ, ಮುಖಂಡರಾದ ನಿತ್ಯಾನಂದ ಶೆಟ್ಟಿ, ಪ್ರಖ್ಯಾತ ಶೆಟ್ಟಿ, ಗೋಪಿ ನಾಯ್ಕ, ಸದಾಶಿವ ನಾಯ್ಕ, ಸುನಿತಾ ಡಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.