ಮತದಾನಕ್ಕೆ ವೇತನ ಸಹಿತ ರಜೆ ನೀಡಲು ಸೂಚನೆ

Update: 2023-04-28 14:50 GMT
ಮಂಗಳೂರು: ರಾಜ್ಯ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಮೇ10ರಂದು ನಿಗದಿಪಡಿಸಲಾದ ಮತದಾನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಜಿಲ್ಲಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕ (ಅರ್ಹ ಮತದಾರರ) ರಿಗೆ ವೇತನ ಸಹಿತ ರಜೆ ಘೋಷಿಸಲು ಎಲ್ಲಾ ಮಾಲಕರು/ನಿಯೋಜಕರಿಗೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಸೂಚನೆ ನೀಡಿದ್ದಾರೆ. ವೇತನ ಸಹಿತ ರಜೆ ನೀಡದಿದ್ದರೆ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Similar News