ಪರೀಕ್ಷೆಯ ಫಲಿತಾಂಶದ ನಂತರ 9 ಆಂಧ್ರ ಶಾಲಾ ವಿದ್ಯಾರ್ಥಿಗಳು ಆತ್ಮಹತ್ಯೆ

Update: 2023-04-29 04:24 GMT

ಹೈದರಾಬಾದ್: ಆಂಧ್ರಪ್ರದೇಶದ ಇಂಟರ್‌ಮೀಡಿಯೇಟ್‌ ಪರೀಕ್ಷಾ ಮಂಡಳಿಯು ಬುಧವಾರ 11 ಹಾಗೂ  12 ನೇ ತರಗತಿಯ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ಆಂಧ್ರಪ್ರದೇಶದಲ್ಲಿ ಒಂಬತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು NDTV ವರದಿ ಮಾಡಿದೆ.

ಇನ್ನಿಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 11ನೇ ತರಗತಿಯಲ್ಲಿ ಶೇ. 61ರಷ್ಟು ಉತ್ತೀರ್ಣರಾಗಿದ್ದರೆ, 12ನೇ ತರಗತಿಯಲ್ಲಿ ಶೇ.  72ರಷ್ಟು ಫಲಿತಾಂಶ ಬಂದಿದೆ.

ಬಿ. ತರುಣ್ (17) ಎಂಬಾತ  ಶ್ರೀಕಾಕುಳಂ ಜಿಲ್ಲೆಯಲ್ಲಿ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಜಿಲ್ಲೆಯ ದಂಡು ಗೋಪಾಲಪುರಂ ಗ್ರಾಮದವನಾದ ಇಂಟರ್‌ಮೀಡಿಯೇಟ್‌ ಪ್ರಥಮ ವರ್ಷದ ವಿದ್ಯಾರ್ಥಿ ಹೆಚ್ಚಿನ ಪೇಪರ್‌ಗಳಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಮನನೊಂದಿದ್ದ ಎನ್ನಲಾಗಿದೆ.

ಮಲ್ಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿನಾಧಪುರಂನಲ್ಲಿರುವ ತನ್ನ ನಿವಾಸದಲ್ಲಿ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ವಿಶಾಖಪಟ್ಟಣಂ ಜಿಲ್ಲೆಯವಳು. ಅಖಿಲಶ್ರೀ  ಇಂಟರ್‌ಮೀಡಿಯೇಟ್ ಮೊದಲ ವರ್ಷದ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾದ ನಂತರ ಅಸಮಾಧಾನಗೊಂಡಿದ್ದಾಳೆ ಎಂದು ವರದಿಯಾಗಿದೆ.

ಮತ್ತೊಬ್ಬ 18 ವರ್ಷದ ಯುವಕ ವಿಶಾಖಪಟ್ಟಣಂನ ಕಂಚರಪಾಲೆಂ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾನೆ. ಅವರು ಇಂಟರ್‌ಮೀಡಿಯೇಟ್‌ ದ್ವಿತೀಯ ವರ್ಷದಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣನಾಗಿದ್ದ. 

Similar News