ಪುಲಿಕೇಶಿ ನಗರದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ರೋಡ್ ಶೋ
Update: 2023-04-30 14:29 GMT
ಬೆಂಗಳೂರು: ನಗರದ ಪುಲಿಕೇಶಿ ನಗರದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ರವರು ಆಮ್ ಆದ್ಮಿ ಪಕ್ಷದ ಪರ ಬೃಹತ್ ರೋಡ್ ಶೋ ನಡೆಸಿದರು.
ಜನತೆ ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕಾದ ಪರಿಸ್ಥಿತಿ ಇದೆ. ಶೂನ್ಯ ಕಮಿಷನ್ ಸರ್ಕಾರ ಬಂದಲ್ಲಿ ಮಾತ್ರ ಮುಂದಿನ ಪೀಳಿಗೆಯ ಭವಿಷ್ಯ ಉಜ್ವಲವಾಗಲಿದ್ದು ದೇಶ ಅಭಿವೃದ್ಧಿ ಪಥದೊಡೆಗೆ ಸಾಗಬೇಕೆಂದರೆ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲಿಸ ಬೇಕಾದ್ದು ಅನಿವಾರ್ಯ ಎಂದು ಭಗವಂತ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಪುಲಿಕೇಶಿ ನಗರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುರೇಶ್ ರಾಥೋಡ್ ಸೇರಿದಂತೆ ಪಕ್ಷದ ಅನೇಕ ಮುಖಂಡರುಗಳು ಕಾರ್ಯಕರ್ತರುಗಳು ಭಾಗವಹಿಸಿದ್ದರು.