ವಿವಾಹ ಸಮಾರಂಭದಲ್ಲಿ ಕುದಿಯುತ್ತಿದ್ದ ರಸಂ ಪಾತ್ರೆಗೆ ಬಿದ್ದು ಯುವಕ ಮೃತ್ಯು

Update: 2023-05-01 07:07 GMT

ಚೆನ್ನೈ: ಚೆನ್ನೈನ ನೆರೆಯ ಜಿಲ್ಲೆಯಾದ ತಿರುವಳ್ಳುವರ್ ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಕುದಿಯುತ್ತಿದ್ದ ರಸಂ ಪಾತ್ರೆಗೆ ಬಿದ್ದು 21 ವರ್ಷದ ಯುವಕನೊಬ್ಬ ಸುಟ್ಟ ಗಾಯಗಳಿಂದ ಮೃತಪಟ್ಟಿರುವ ಘಟನೆ ನಡೆದಿದೆ ಎಂದು PTI ವರದಿ ಮಾಡಿದೆ.

ಸಂತ್ರಸ್ತ ಯುವಕನು ಕಾಲೇಜು ವಿದ್ಯಾರ್ಥಿಯಾಗಿದ್ದು, ಆಹಾರ ಪೂರೈಕೆ ಸಂಸ್ಥೆಯೊಂದರಲ್ಲಿ ಅರೆಕಾಲಿಕ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ಕಳೆದ ವಾರ ಈ ಘಟನೆ ನಡೆದಾಗ ಯುವಕನು ವಿವಾಹ ಸಮಾರಂಭವೊಂದರಲ್ಲಿ ಅತಿಥಿಗಳಿಗೆ ಆಹಾರ ಪೂರೈಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅತಿಥಿಗಳಿಗೆ ಬಡಿಸಲು ಸಿದ್ಧಪಡಿಸಲಾಗುತ್ತಿದ್ದ ಕುದಿಯುವ ರಸಂ ಪಾತ್ರೆಗೆ ಯುವಕ ಆಕಸ್ಮಿಕವಾಗಿ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ತೀವ್ರ ಸುಟ್ಟ ಗಾಯಗಳಿಗೀಡಾಗಿದ್ದ ಯುವಕನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತಪಟ್ಟಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News