ಅಲ್ಪಸಂಖ್ಯಾತ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2023-05-02 15:50 GMT

ಬೆಂಗಳೂರು, ಮೇ 2: ಅಲ್ಪಸಂಖ್ಯಾತ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಆರನೆ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನವಾಗಿದೆ.

ರಾಜ್ಯದಲ್ಲಿ 29 ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, 80 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 4 ಸರಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿ ಒಟ್ಟು 113 ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿ ಎಲ್ಲ ಜಿಲ್ಲೆಗಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಚುನಾವಣಾ ಆಯೋಗದ ಸಹಮತಿಯೊಂದಿಗೆ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಲು ಸೂಚಿಸಲಾಗಿದೆ.

ಎಲ್ಲ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‍ನಲ್ಲಿ (https://sevasindhuservices.karnataka.gov.in) ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಃಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ  ಕೇಂದ್ರಗಳು ಮತ್ತು ಜಿಲ್ಲ ಅಲ್ಪಸಂಖ್ಯಾತರ ಅಧಿಕಾರಿ ಕಚೇರಿಗಳಲ್ಲಿಯೂ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದು. 

Similar News