ಪುಣೆ: ಗೋಡೌನ್ ನಲ್ಲಿ ಭಾರೀ ಬೆಂಕಿ, ಮೂವರು ಮೃತ್ಯು

Update: 2023-05-06 11:14 GMT

ಪುಣೆ: ಮಹಾರಾಷ್ಟ್ರದ ಪುಣೆಯ ವಾಘೋಲಿ ಪ್ರದೇಶದಲ್ಲಿನ ಅಲಂಕಾರ ಸಾಮಗ್ರಿಗಳ ಗೋಡೌನ್‌ನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಪುಣೆಯ ವಾಘೋಲಿ ಪ್ರದೇಶದಲ್ಲಿನ ಅಲಂಕಾರ ಸಾಮಗ್ರಿಗಳ ಗೋಡೌನ್‌ನಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Similar News