ಬಿಜೆಪಿ ವಿರುದ್ಧ ಪತ್ರಿಕೆಗಳಿಗೆ ಜಾಹೀರಾತು: ಡಿ.ಕೆ.ಶಿವಕುಮಾರ್ ಗೆ ಚುನಾವಣಾ ಆಯೋಗ ನೋಟಿಸ್

Update: 2023-05-06 17:46 GMT

ಬೆಂಗಳೂರು, ಮೇ 6: ಬಿಜೆಪಿ ಸರಕಾರವು ನೇಮಕಾತಿ, ವರ್ಗಾವಣೆ ಹಾಗೂ ವಿವಿಧ ಹುದ್ದೆಗಳಿಗೆ ನಿರ್ದಿಷ್ಟ ಮೊತ್ತದ ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪತ್ರಿಕೆಗಳಿಗೆ ಕಾಂಗ್ರೆಸ್ ಪಕ್ಷವು ನೀಡಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಬಿಜೆಪಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ನೋಟಿಸ್ ನೀಡಿದೆ.

ಜಾಹೀರಾತಿನಲ್ಲಿ ಆಪಾದಿಸಿರುವ ದರಗಳಿಗೆ ಸಂಬಂಧಿಸಿದಂತೆ ಮೇ 7ರ ಸಂಜೆ 7 ಗಂಟೆಯೊಳಗಾಗಿ ಪುರಾವೆಗಳನ್ನು ಒದಗಿಸಬೇಕು. ಅಲ್ಲದೆ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕಾಗಿ ತಮ್ಮ ವಿರುದ್ಧ ಆರ್‍ಪಿ ಕಾಯ್ದೆ ಹಾಗೂ ಐಪಿಸಿ ಅಡಿಯಲ್ಲಿ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ವಿವರಿಸುವಂತೆ ಚುನಾವಣಾ ಆಯೋಗ ಸೂಚಿಸಿದೆ.

Similar News