ದ.ಕ., ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‍ಗೆ ಸಿಪಿಐ ಬೆಂಬಲ

Update: 2023-05-07 14:23 GMT

ಪುತ್ತೂರು: ರಾಜ್ಯದ ಹಲವು ಕಡೆಗಳಲ್ಲಿ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು ಉಳಿದ ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಲು ಸಿಪಿಐ ರಾಜ್ಯ ಸಮಿತಿ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ನೀಡಲಿದೆ ಎಂದು ಸಿಪಿಐನ ಜಿಲ್ಲಾ ಕಾರ್ಯದರ್ಶಿ ಬಿ. ಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಜನತೆಯ, ಕಾರ್ಮಿಕರ, ರೈತರ, ವಿದ್ಯಾರ್ಥಿಗಳ, ಯುವಜನರ, ಮಹಿಳೆಯರ ಮತ್ತು ಜನಸಾಮಾನ್ಯರ ಹಕ್ಕುಗಳ ರಕ್ಷಣೆ ಹಾಗೂ ದೇಶದ ಸಂವಿಧಾನದ ಉಳಿವಿಗಾಗಿ ಈ ಚುನಾವಣೆಯಲ್ಲಿ ಬಲಪಂಥೀಯ, ಮತಾಂಧ, ಸ್ವಜನಹಿತ ಪಕ್ಷಗಳನ್ನು ಸೋಲಿಸುವ ಅಗತ್ಯವಿದೆ.

ಈ ಎರಡು ಜಿಲ್ಲೆಗಳ ಮತದಾರರು ರಾಜ್ಯದ ಮತ್ತು ದೇಶದ ಉಳಿವಿಗಾಗಿ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಬಹುಮತ ದಿಂದ ಆರಿಸಿ ಬರುವಂತೆ ಸಹಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ. 

Similar News