ಲಿಂಗಾಯತ ವೇದಿಕೆ ಎನ್ನುವುದು ಕಾಲ್ಪನಿಕ ಸಂಘಟನೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

''4 ಜನ ಸೇರಿ ಏನೋ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತದೆಯೇ?''

Update: 2023-05-08 05:53 GMT

ಹುಬ್ಬಳ್ಳಿ, ಮೇ8: ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು  ಕಾಲ್ಪನಿಕ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
 
ವೀರಶೈವ ಸಮಾಜ  ದೊಡ್ಡದಿದ್ದು ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರನ್ನು  ಗೌರವಿಸುವುದಾಗಿ ಹೇಳಿದರು. ಚುನಾವಣೆ ಸಂದರ್ಭದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸಂಸ್ಥೆಯ ಹೆಸರು ಬಳಸುವುದು ಸರಿಯಲ್ಲ.

ನಾಲ್ಕು ಜನ ಸೇರಿ ಏನೋ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತದೆಯೇ? ಲಿಂಗಾಯತ ಸಮಾಜ  ಸಮುದ್ರ ಇದ್ದಂತೆ.
ಲಿಂಗಾಯತ ವೇದಿಕೆ ಚುನಾವಣೆ ಸಂದರ್ಭಗಳಲ್ಲಿ ಹುಟ್ಟಿಕೊಂಡ ಸಂಘಟನೆ ಎಂದರು. 

''ನಮ್ಮನ್ನು ಪ್ರಶ್ನಿಸಲು ನೈತಿಕತೆ ಇಲ್ಲ''

ಬಿಜೆಪಿ ವಿರುದ್ಧ ಯಾವುದೇ ಪ್ರಕರಣ ಇಲ್ಲ, ಸಾಕ್ಷಿಯೂ ಇಲ್ಲ. ಭ್ರಷ್ಟಾಚಾರ ಆರೋಪದ ದಾಖಲೆ‌ ಕೊಡಿ ಎಂದು ಚುನಾವಣಾ ಆಯೋಗವನ್ನು ಕೇಳಿದ್ದು ಅವರಿಗೆ ಕೊಡಲು ಆಗಿಲ್ಲ ಎಂದರು.  ಇಷ್ಟೆಲ್ಲಾ ಮಾತನಾಡುವ ಎಲ್ಲಾ ಕಾಂಗ್ರೆಸ್‌ನವರ ಮೇಲೆ ಭ್ರಷ್ಟಾಚಾರ ಪ್ರಕರಣಗಳಿದ್ದು,  ನ್ಯಾಯಾಲಯಗಳಿಗೆ ಅಲೆದಾಡುತ್ತಿದ್ದಾರೆ ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ? ಎಂದರು.

ತಪ್ಪು ಮಾಡುವುದನ್ನು ಕಾಂಗ್ರೆಸ್ ಬಿಡಲಿ

ಐಟಿಯವರು ಎಲ್ಲಾ ಜಿಲ್ಲೆಗಳಲ್ಲಿ ಇದ್ದಾರೆ, ಅವರಿಗೆ ಎಲ್ಲಿ ತಪ್ಪು‌ನಡೆಯುತ್ತೆ ಅನ್ನೋ ಮಾಹಿತಿ ಅವರಿಗೆ ಇರುತ್ತದೆ. ಕಾಂಗ್ರೆಸ್ ನವರು ತಪ್ಪು ಮಾಡಿದ್ದಾರೆ  ನಾವು ಏನು  ಮಾಡೋಕಾಗುತ್ತೆ.? ದಾಳಿಯಾಗುತ್ತದೆ ಎಂದು ಎಂ.ಬಿ. ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಮೊದಲೇ ಹೇಳಿ ಬಿಡೋದು ಕಾಂಗ್ರೆಸ್ ನವರ ತಂತ್ರಗಾರಿಕೆ ಎಂದರು.

Similar News