ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಸಾಧ್ಯತೆ ಕುರಿತು ಡಿ.ಕೆ. ಸುರೇಶ್ ಹೇಳಿದ್ದೇನು?

Update: 2023-05-13 16:00 GMT

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆದರೆ ಹೆಚ್ಚಿನ ಸಂತೋಷ ಆಗುತ್ತದೆ ಎಂದು ಅವರ ಸಹೋದರ ಡಿ.ಕೆ‌.ಸುರೇಶ್ ಹೇಳಿದ್ದಾರೆ. 

ಅಣ್ಣ ಮುಖ್ಯಮಂತ್ರಿ ಆಗುವ ಸಾಧ್ಯತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಾಗೇನಾದರೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೇರಿದರೆ ಒಬ್ಬ ಸಹೋದರನಾಗಿ ಹಾಗೂ ಓರ್ವ ಸಾಮಾನ್ಯ ವ್ಯಕ್ತಿಯಾಗಿ ಸಂತೋಷ ಪಡುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಊಹಾಪೋಹಗಳು ಹಬ್ಬಿರುವಾಗಲೇ ಡಿ.ಕೆ.ಸುರೇಶ್ ಈ ಹೇಳಿಕೆ ನೀಡಿದ್ದಾರೆ.

ಪಕ್ಷದೊಳಗೆ ಡಿಕೆ ಶಿವಕುಮಾರ್‌ ಬಲಿಷ್ಠ ರಾಜಕೀಯ ಹಿಡಿತ ಹೊಂದಿದ್ದು, ಸಿಎಂ ರೇಸ್‌ ನಲ್ಲಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. 

ಅದಾಗ್ಯೂ, ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನು ಕಾಂಗ್ರೆಸ್‌ ಶಾಸಕರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಆಯ್ಕೆಗೊಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪಕ್ಷದ ಹಿರಿಯ ನಾಯಕರೊಂದಿಗೆ ಸರಣಿ ಮಾತುಕತೆ ಹಾಗೂ ಸಮಾಲೋಚನೆಯ ನಂತರ ಮುಂದಿನ ದಿನಗಳಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ.

Similar News