ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ
Update: 2023-05-13 17:02 GMT
ಬೆಂಗಳೂರು, ಮೇ 13: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಚುನಾವಣಾ ಫಲಿತಾಂಶ ಹಿನ್ನೆಲೆ ತವರು ಜಿಲ್ಲೆ ಹಾವೇರಿಯಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಬೈರತಿ ಬಸವರಾಜ್, ಸುರೇಶ್ ಕುಮಾರ್ , ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.