ಕಾಂಗ್ರೆಸ್ ಗೆ ಬಹುಮತ: ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಅಭಿನಂದನೆ
Update: 2023-05-13 18:06 GMT
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸ್ಟಾಲಿನ್ ಅವರು ಶನಿವಾರ ರಾತ್ರಿ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ತಿಳಿಸಿದರು.
ಸ್ಟಾಲಿನ್ ಅವರಿಗೆ ಧನ್ಯವಾದ ಹೇಳಿದ ಡಿ ಕೆ ಶಿವಕುಮಾರ್ ಅವರು ತಮಿಳುನಾಡಿಗೆ ಬಂದು ತಮ್ಮನ್ನು ಭೇಟಿ ಮಾಡಿ ಕೃತಜ್ಞತೆ ತಿಳಿಸುವುದಾಗಿ ಹೇಳಿದರು.