ಉಪ್ಪೂರಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Update: 2023-05-16 14:23 GMT

ಉಡುಪಿ, ಮೇ 16: ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ವತಿಯಿಂದ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಉಪ್ಪೂರು ಅಬ್ಬನಕುದ್ರು ಉಪಕೇಂದ್ರದಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ 45 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 6 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 7 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುವುದು.

ಶಿಬಿರದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಮ್.ಜಿ.ರಾಮ, ಕೊಳಲಗಿರಿ ಪ್ರಾ. ಆ. ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಬಿಂದುಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Similar News