ಜಾತಿ ಗಣತಿಗೆ ಸಂಬಂಧಿಸಿ ಪಾಟ್ನಾ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

Update: 2023-05-18 09:28 GMT

ಹೊಸದಿಲ್ಲಿ: ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಪಾಟ್ನಾ ಹೈಕೋರ್ಟ್‌ನ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ಈ ವಿಷಯವು ಹೈಕೋರ್ಟ್‌ನಲ್ಲಿ ಬಾಕಿ ಇದೆ ಎಂಬ ಬಿಹಾರ ಸರಕಾರದ ವಾದವನ್ನು ಪೀಠವು ಗಮನಕ್ಕೆ ತೆಗೆದುಕೊಂಡಿತು.

"ಯಾರು ದತ್ತಾಂಶವನ್ನು ಸಂಗ್ರಹಿಸುತ್ತಿದ್ದಾರೆ? ನಾವು  ಅದು ಸಮೀಕ್ಷೆಯೋ  ಅಥವಾ ಜನಗಣತಿಯೋ ಎಂದು ತಿಳಿದುಕೊಳ್ಳಲು ಬಯಸುತ್ತೇವೆ" ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

 ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಕುರಿತು ಪಾಟ್ನಾ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಬಿಹಾರ ಸರಕಾರವು ಮೇ 11 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಹೈಕೋರ್ಟ್‌ನ ಮೇ 4 ರ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ ರಾಜ್ಯ ಸರಕಾರವು ತಡೆಯಾಜ್ಞೆಯಿಂದಾಗಿ  ಸಂಪೂರ್ಣ ಜಾತಿಗಣತಿ ಮೇಲೆ  ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

Similar News