​ಮಾವೇಲಿ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಕೋಚ್

Update: 2023-05-18 13:38 GMT

ಮಂಗಳೂರು: ಮಾವೇಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಲೀಪರ್ ಹಾಗೂ ಎಸಿ ಕೋಚ್ ಸೇರ್ಪಡೆ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಮೇ 20ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ನಂ. 16603 ‘ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್’ ಮಾವೇಲಿ ಎಕ್ಸ್‌ಪ್ರೆಸ್ ರೈಲಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಸ್ಲೀಪರ್ ಕೋಚ್ ಒದಗಿಸಲಾಗುವುದು.

ಮೇ 21ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕವಾಗಿ ಒಂದು ಹೆಚ್ಚುವರಿ ಎಸಿ 3 ಟಯರ್ ಕೋಚ್, ಮೇ 19 ಮತ್ತು 21ರಂದು ತಿರುವನಂತಪುರಂ ಸೆಂಟ್ರಲ್‌ನಿಂದ ಹೊರಡುವ ನಂ. 16604 ಮಾವೇಲಿ ಎಕ್ಸ್‌ಪ್ರೆಸ್‌ಗೆ 1 ಹೆಚ್ಚುವರಿ ಸ್ಲೀಪರ್ ಕೋಚ್ ಹಾಗೂ ಮೇ 22ರಂದು ತಿರುವನಂತ ಪುರಂನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್‌ಗೆ 1 ಹೆಚ್ಚುವರಿ 3 ಟಯರ್ ಕೋಚ್ ಒದಗಿಸಲಾಗುವುದು ಎಂದು ತಿಳಿಸಿದೆ.

Similar News