ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2023-05-18 15:27 GMT
ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಚಾಂತಾರು ಗ್ರಾಮದ ನಿವಾಸಿ ಮಂಜುನಾಥ ಗಾಣಿಗ (88) ಎಂಬವರು ಮೇ 17ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಚಾರಾ ಗ್ರಾಮದ ಹೇರ್ಗಲ್ಲು ನಿವಾಸಿ ಸುರೇಶ್ ಪೂಜಾರಿ(52) ಎಂಬವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮೇ 18ರಂದು ಬೆಳಗಿನ ಜಾವ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.