ಲಂಚ ಆರೋಪ: ಸಿಬಿಐ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ವಾಂಖೆಡೆ

Update: 2023-05-19 17:02 GMT

ಮುಂಬೈ, ಮೇ 19: ಸಿಬಿಐ ತನ್ನ ವಿರುದ್ಧ ದಾಖಲಿಸಿದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಮಾದಕ ದ್ರವ್ಯ ನಿಯಂತ್ರಣ ಬ್ಯುರೊ (NCB)ದ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಶುಕ್ರವಾರ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕೋರ್ಡೆಲಿಯಾ ಹಡಗಿನಲ್ಲಿ ಮಾದಕ ದ್ರವ್ಯದ ಪತ್ತೆಯಾದ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಸಿಲುಕಿಸದೇ ಇರಲು 25 ಕೋ.ರೂ. ಲಂಚ ನೀಡುವಂತೆ ವಾಂಖೆಡೆ ಬಾಲಿವುಡ್ ನಟ ಶಾರುಖ್ ಖಾನ್ ಅವರಲ್ಲಿ ಬೇಡಿಕೆ ಇರಿಸಿದ್ದ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಸಿಬಿಐಯ ಎಫ್‌ಐಆರ್‌ಗೆ ಸಂಬಂಧಿಸಿ ಬಲವಂತದ ಕ್ರಮಗಳಿಂದ ರಕ್ಷಣೆ ನೀಡುವಂತೆ ಕೂಡ ವಾಂಖೆಡೆ ಮನವಿಯಲ್ಲಿ ಕೋರಿದ್ದಾರೆ. ಅವರ ಅರ್ಜಿಯನ್ನು ಉಚ್ಚ ನ್ಯಾಯಾಲಯದ ರಜಾಕಾಲದ ಪೀಠಕ್ಕೆ ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ಇತ್ತೀಚೆಗೆ ವಾಂಖೆಡೆ ಹಾಗೂ ಇತರ ನಾಲ್ವರ ವಿರುದ್ಧ ಸಿಬಿಐ ಇತೀಚೆಗೆ ಪ್ರರಣ ದಾಖಿಲಿಸಿತ್ತು.

Similar News