5 ಗ್ಯಾರಂಟಿಗಳಿಗೆ ಇಂದೇ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-05-20 09:33 GMT

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು(ಮೇ.20)ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ ರಾಜ್ಯದ ಜನರಿಗೆ ಸಿಕ್ಕಿರುವ ಗೆಲುವು. ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ. ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು ಇವತ್ತೇ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ಆದೇಶ ಹೊರಡಿಸಿ ಜಾರಿಗೆ ತರುತ್ತೇವೆ. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ' ಎಂದು ಭರವಸೆ ನೀಡಿದರು.

'ರಾಜ್ಯದಲ್ಲಿ ಪ್ರಚಾರ ಆರಂಭವಾಗಿದ್ದು, ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಮೂಲಕ. ಇದರ ಜತೆಗೆ ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಗಾಂಧಿ ಹಾಗೂ ಅನೇಕ ನಾಯಕರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದು ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಇದರ ಜತೆಗೆ ಸಾಹಿತಿಗಳು, ಚಿಂತಕರು, ಸಂಘಟನೆ ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದು, ಧನ್ಯವಾದ ಅರ್ಪಿಸುತ್ತೇನೆ. ರಾಜ್ಯದ ಯುವಕರು, ರೈತರು, ಕಾರ್ಮಿಕರು, ಮಹಿಳೆಯರಿಗೂ ಧನ್ಯವಾದ ತಿಳಿಸುತ್ತೇನೆ' ಎಂದರು.

Similar News