ಉಡುಪಿ ಜಿಲ್ಲೆಯ 12 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಆರಂಭ

Update: 2023-05-20 08:41 GMT

ಉಡುಪಿ, ಮೇ 20: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯು ಉಡುಪಿಯ 6, ಕಾರ್ಕಳದ 2, ಕುಂದಾಪುರದ 2 ಹಾಗೂ ಬ್ರಹ್ಮಾವರದ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆಯಿತು.

ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದಾರೆ.

ಕುಂದಾಪುರದ ಜ್ಯೂನಿಯರ್ ಕಾಲೇಜು ಹಾಗೂ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಕ್ರಮವಾಗಿ 744 ಮತ್ತು 600 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಿಗ್ಗೆ 9 ಗಂಟೆಯಿಂದಲೇ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರದ ವರೆಗೂ ಕರೆತಂದಿದ್ದು ಪರೀಕ್ಷೆ ಮುಗಿಯುವ ತನಕ ಕಾಯುತ್ತಿರುವ ದೃಶ್ಯ ಕಂಡುಬಂದಿತ್ತು.


ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದ್ದು ಪೊಲೀಸರನ್ನು ನಿಯೋಜಿಸಲಾಗಿದೆ.

Similar News