ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೇ ಪುನರಾರಂಭ: ಸಿಎಂ ಸಿದ್ದರಾಮಯ್ಯ

Update: 2023-05-20 12:20 GMT

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆ ನಂತರ ಪಂಚ ಯೋಜನೆಗಳ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲ ಸದಸ್ಯರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತೀರ್ಮಾನಗಳನ್ನು ಪ್ರಕಟಿಸಿದರು.

'ಎಲ್ಲ ಇಂದಿರಾ ಕ್ಯಾಂಟೀನ್ ಗಳನ್ನು ಪುನರಾರಂಭ ಮಾಡಲಾಗುವುದು. ಆ ಬಗ್ಗೆಯೂ ಅಗತ್ಯ ಮಾಹಿತಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ' ಎಂದು ತಿಳಿಸಿದರು. 

Similar News