ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ: ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

Update: 2023-05-21 05:10 GMT

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರವಿವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

1984 ಹಾಗೂ  1989 ರ ನಡುವೆ ಭಾರತದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಅವರನ್ನು 1991 ರಲ್ಲಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಎಲ್‌ಟಿಟಿಇ ಭಯೋತ್ಪಾದಕರು ಹತ್ಯೆ ಮಾಡಿದ್ದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ನಾನು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Similar News