ಅಶೋಕ್ ಪರ್ಕಳ
Update: 2023-05-21 15:17 GMT
ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅಶೋಕ್ ಪರ್ಕಳ(54) ಇಂದು ನಿಧನರಾದರು.
ಸಂಘದ ಪ್ರಚಾರಕರಾಗಿ ಮಣಿಪುರ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು, ಪ್ರಸ್ತುತ ಸಂಘದ ಉಡುಪಿ ಜಿಲ್ಲೆಯ ಧರ್ಮ ಜಾಗರಣಾ ಇದರ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಇವರು ತಾಯಿ, ಮೂವರು ಸಹೋದರರು, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.