ಮುಖ್ಯಮಂತ್ರಿ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ನೇಮಕ

Update: 2023-05-22 09:04 GMT

ಬೆಂಗಳೂರು: ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿಯನ್ನಾಗಿ ಎಂ. ವೆಂಕಟೇಶ್ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದೂ ಮೊದಲೋ ಅಲ್ಲಿಯವರೆಗೆ ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ್ ಅಧಿಸೂಚನೆ ಹೊರಡಿಸಿದ್ದಾರೆ. 

Similar News