ಕೊಡ್ಮಾಣ್ ಕಾಂತಪ್ಪ ಶೆಟ್ಟಿ

Update: 2023-05-22 17:17 GMT

ಬಂಟ್ವಾಳ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘದ ಕೊಡ್ಮಾಣ್ ಕಾಂತಪ್ಪ ಶೆಟ್ಟಿ (61) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಆರೆಸ್ಸೆಸ್  ಹಾಗೂ  ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಅವರು ಒಂದು ಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು ಆರೆಸ್ಸೆಸ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೇರಮಜಲು ಗ್ರಾ.ಪಂ. ಅಧ್ಯಕ್ಷರಾಗಿ, ವಿಟ್ಮ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ,  ಫರಂಗೀಪೇಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿ, ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ, ಕೊಡ್ಮಾಣ್ ಪ್ರೌಢಶಾಲಾ ಎಸ್ಡಿಎಂಸಿ  ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅವರು ಪತ್ನಿ ಹಾಗೂ ಸಹೋದರ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.

Similar News

ಹಸೈನಾರ್