ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಖಾದರ್​ಗೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು: ನೂತನ ಸ್ಪೀಕರ್ ಗೆ ಸಿಎಂ ಅಭಿನಂದನೆ

Update: 2023-05-24 07:12 GMT

ಬೆಂಗಳೂರು: ವಿಧಾನಸಭೆ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾದ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ. ಖಾದರ್ ಅವರಿಗೆ ವಿಧಾನಸಭೆಯಲ್ಲಿ ಗಣ್ಯರು ಅಭಿನಂದನೆ ಸಲ್ಲಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 'ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಖಾದರ್ ಗೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್​ ಉತ್ತಮ ಕೆಲಸ ಮಾಡಿದ್ದಾರೆ' ಎಂದು ಶ್ಲಾಘಿಸಿದರು. 

'ಸ್ಪೀಕರ್ ಆದವರಿಗೆ ತಾಳ್ಮೆ ಮುಖ್ಯ, ಅದು ಖಾದರ್ ಅವರಲ್ಲಿದೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು' ಎಂದರು.

Full View

Similar News