ಆಗ ಆತ್ಮೀಯ ಖಾದರ್, ಈಗ ಸನ್ಮಾನ್ಯ ಸಭಾಧ್ಯಕ್ಷರಾಗಿದ್ದೀರಿ: ನೂತನ ಸ್ಪೀಕರ್​ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

Update: 2023-05-24 08:06 GMT

ಬೆಂಗಳೂರು: ವಿಧಾನಸಭೆ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾದ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ. ಖಾದರ್ ಅವರಿಗೆ ವಿಧಾನಸಭೆಯಲ್ಲಿ ಗಣ್ಯರು ಅಭಿನಂದನೆ ಸಲ್ಲಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, 'ಆಗ ನನಗೆ ಆತ್ಮೀಯ ಖಾದರ್ ಆಗಿದ್ದವರು, ಈಗ ಸನ್ಮಾನ್ಯ ಸಭಾಧ್ಯಕ್ಷರಾಗಿದ್ದೀರಿ, ನಿಮ್ಮ ಜೊತೆ ಈ ಹಿಂದೆ ಹಲವು ಬಾರಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ' ಎಂದು ನೆನಪಿಸಿಕೊಂಡರು. 

'ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು, ಯು.ಟಿ.ಖಾದರ್​ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

'ಈ ಹಿಂದೆ ಸ್ಪೀಕರ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ, ನೀವು ಕೂಡ ಆ ಸ್ಥಾನದಲ್ಲಿ ಕುಳಿತು ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ' ಎಂದು ಹೇಳಿದರು. 

Full View

Similar News