ಕಾಸರಗೋಡು : ಯುವತಿ ಆತ್ಮಹತ್ಯೆ
ಕಾಸರಗೋಡು : ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ.
ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತರು.
ಬುಧವಾರ ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದಿವ್ಯಾ ಮಂಗಳವಾರ ರಾತ್ರಿ ಕೆಲಸ ಮುಗಿಸಿ ಬುಧವಾರ ಬೆಳಗ್ಗೆ ಮನೆಗೆ ಬಂದಿದ್ದರು. ತಾಯಿ ಹಾಗೂ ಮನೆ ಮಂದಿ ಹೊರಗಡೆ ತೆರಳಿದ್ದ ಸಂದರ್ಭ ದಲ್ಲಿ ಕೃತ್ಯ ನಡೆದಿದೆ. ಸಂಜೆ ಪರಿಸರ ವಾಸಿಗಳು ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಈ ನಡುವೆ ಕೋಣೆಯಿಂದ ದಿವ್ಯಾಳ ಆತ್ಮಹತ್ಯೆ ಪತ್ರ ಲಭಿಸಿದೆ. ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಯುವಕನೋರ್ವನ ಕೇಂದ್ರೀಕರಿಸಿ ಆದೂರು ಪೊಲೀಸರು ತನಿಖೆ ಅರಂಭಿಸಿದ್ದಾರೆ. ಯುವಕ ನಿರಂತರವಾಗಿ ಮೊಬೈಲ್ ನಲ್ಲಿ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.