ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ: ಮತದಾರರ ಪಟ್ಟಿ ತಯಾರಿಗೆ ಆಯೋಗದ ಸೂಚನೆ
Update: 2023-05-26 16:13 GMT
ಬೆಂಗಳೂರು, ಮೇ 26: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ವಿಂಗಡಣೆ ಅಧಿಸೂಚನೆಯನ್ನು ಆಧರಿಸಿ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ರಾಜ್ಯ ಚುನಾವಣಾ ಆಯೋಗ ಶುಕ್ರವಾರ ಸುತ್ತೋಲೆ ಹೊರಡಿಸಿದೆ.
ಮೇ 26ರಿಂದ ಜೂನ್ 4ರ ಒಳಗೆ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಗುರುತಿಸುವುದು, ಪಟ್ಟಿ ಸಿದ್ದಪಡಿಸಿ ಜೂನ್ 14ರೊಳಗೆ ಮತದಾರರ ಕರಡು ಪಟ್ಟಿ ಪ್ರಕಟಿಸಬೇಕು. ಜೂ. 19ಕ್ಕೆ ಆಕ್ಷೇಪಣೆ ಸಲ್ಲಿಸಲು ಕೊನೆಯದಿನ. ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಜೂನ್ 27ರೊಳಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಆಯೋಗ ತಿಳಿಸಿದೆ.