MLA , MLC ಆಗಿಲ್ಲದ ಎನ್.ಎಸ್.ಬೋಸರಾಜುಗೆ ಒಲಿದ ಸಚಿವ ಸ್ಥಾನ!

Update: 2023-05-26 19:18 GMT

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದ್ದು, ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ.

ಕೆಲವು ಹಿರಿಯರಿಗೆ ಸಚಿವ ಸ್ಥಾನ ಕೈ ತಪ್ಪಿದೆರೆ, ಮತ್ತೊಂದು ಕಡೆ ಶಾಸಕ, ವಿಧಾನ ಪರಿಷತ್ ಸದಸ್ಯರೂ ಆಗಿರದ ಎನ್.ಎಸ್.ಬೋಸರಾಜು ಅವರನ್ನು ಸಂಪುಟಕ್ಕೆ ಸೇರಿಸಿರುವುದು ಅಚ್ಚರಿಗೆ ಕಾರಣವಾಗಿದೆ. 

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ: ಎಚ್.ಸಿ ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್ ಗೆ ಸ್ಥಾನ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೋಸರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡುವ ಬಗ್ಗೆ ಕಾಂಗ್ರೆಸ್ ತೀರ್ಮಾನಿಸಿದೆ.   

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಾಜಿ ಶಾಸಕ, ಎಐಸಿಸಿಯ ಹಾಲಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು  ಮಾನ್ವಿಯ ಮಾಜಿ ಶಾಸಕರಾಗಿದ್ದವರು. ಅಲ್ಲದೇ ಈ ಬಾರಿ ತಮ್ಮ ಪುತ್ರ ರವಿ ಬೋಸರಾಜು ಅವರಿಗೆ ಟಿಕೆಟ್ ಕೇಳಿದ್ದರು. ಆದರೆ, ಅವರಿಗೆ ಟಿಕೆಟ್ ನೀಡಲಾಗಿರಲಿಲ್ಲ. ವರಿಷ್ಠರ ನಿರ್ಧಾರದಂತೆ ಅವರು ಟಿಕೆಟ್ ಬೇಡಿಕೆಯನ್ನು ಬಿಟ್ಟುಕೊಟ್ಟಿದ್ದರು. ಅದೊಂದು ಅನುಕಂಪ ಅವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಗೆ ಇದೆ ಎನ್ನಲಾಗುತ್ತಿದೆ.

ಸದ್ಯ ಎಐಸಿಸಿ ಕಾರ್ಯದರ್ಶಿಯಾಗಿರುವ ಎನ್.ಎಸ್.ಬೋಸರಾಜು ಎರಡು ಬಾರಿ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

Similar News