ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ: ಡಿಕೆ ಶಿವಕುಮಾರ್
Update: 2023-05-29 07:08 GMT
ಬೆಂಗಳೂರು: ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.
ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.