ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್
Update: 2023-05-30 05:51 GMT
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಮದ್ಯ ನೀತಿ ಜಾರಿಯಲ್ಲಿನ ಹಗರಣದ ಆರೋಪಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದಲ್ಲಿ ದಿಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದಿಲ್ಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ.
ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ನೇತೃತ್ವದ ಏಕಸದಸ್ಯ ಪೀಠ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದಿದೆ.
ಜಾಮೀನು ಅರ್ಜಿಯ ಕುರಿತು ತೀರ್ಪು ಪ್ರಕಟಿಸಿದ ಹೈಕೋರ್ಟ್, ಸಿಸೋಡಿಯಾ ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು.