ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಮೇ 30: ಪ್ರಸಕ್ತ (2023-24ನೇ) ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿ ನಿಲಯಗಳಲ್ಲಿ 5 ರಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವಿಳಾಸ:
*ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಆ ವಿದ್ಯಾರ್ಥಿಗಳ ಸ್ಯಾಡ್ಸ್ ಐಡಿಯನ್ನು ಪ್ರಸಕ್ತ ಶಾಲೆಯಲ್ಲಿ ಸಂಬಂಧಿಸಿದ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.