ಭಟ್ಕಳ: ಗುತ್ತಿಗೆದಾರ ಆತ್ಮಹತ್ಯೆ
ಭಟ್ಕಳ: ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿ ಯಲ್ಲಿ ವರದಿಯಾಗಿದೆ.
ಮೃತ ಗುತ್ತಿಗೆದಾರನನ್ನು ಶಿರಾಲಿ ಮಣ್ಣಹೊಂಡ ನಿವಾಸಿ ದಿನೇಶ (28) ಎಂದು ಗುರುತಿಸಲಾಗಿದೆ.
ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ದಿನೇಶ್, ಕೆಲಸಕ್ಕೆ ಬೆಳಿಗ್ಗೆ ಮನೆಯಿಂದ ಹೋದವನು ಮನೆಗೆ ಬಾರದೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ವಿಕೊಂಡು ಬಾಕಡಕೇರಿ ಸ್ಮಶಾನದ ಸಮೀಪ ಗೇರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆ ಯಲ್ಲಿ ಮೃತನ ಅಣ್ಣ ಸುಬ್ರಾಯ ನಾಯ್ಕ ದೂರು ನೀಡಿದ್ದು ದೂರನ್ನು ದಾಖಲಿಸಿ ಕೊಂಡ ಪಿ.ಎಸ್.ಐ ಮಂಜುನಾಥ
ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಮೃತ ದೇಹವನ್ನು ಮುರ್ಡೇಶ್ವರ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದವರಿಗೆ ನೀಡಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್.