ಸರಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
Update: 2023-06-06 12:08 GMT
ಬೆಂಗಳೂರು, ಜೂ.6: ಸಹಾಯಕ ಸರಕಾರಿ ಅಭಿಯೋಜಕರು, ಸಹಾಯಕ ಸರಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿ 10 ದಿನದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಕಳೆದ ವರ್ಷ ಜು.23 ಮತ್ತು 24ರಂದು ನಡೆದ ಸಹಾಯಕ ಸರಕಾರಿ ಅಭಿಯೋಜಕರು, ಸಹಾಯಕ ಸರಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿಬಂದಿದ್ದವು. ಈ ಸಂಬಂಧ ಸಲ್ಲಿಸಿದ್ದ ದೂರುಗಳನ್ನು ಆಧಾರಿಸಿ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.