ಪಾರಂಪಳ್ಳಿ -ಪಡುಕೆರೆ ಬೀಚ್ ಸ್ವಚ್ಚತಾ ಕಾರ್ಯಕ್ರಮ

Update: 2023-06-06 12:07 GMT

ಸಾಲಿಗ್ರಾಮ, ಜೂ.6: ಸಾಲಿಗ್ರಾಮ ಪಟ್ಟಣ ಪಂಚಾಯತ್ ಹಾಗೂ ಪಾಂಚ ಜನ್ಯ ಸಂಘ ಪಾರಂಪಳ್ಳಿ ಹಂದಟ್ಟು ಇದರ ಜಂಟಿ ಆಶ್ರಯದಲ್ಲಿ ಪಾರಂಪಳ್ಳಿ -ಪಡುಕೆರೆ ಬೀಚ್ ಸ್ವಚ್ಚತಾ ಕಾರ್ಯಕ್ರಮ ರವಿವಾರ ನಡೆಯಿತು.

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಸದ ಉತ್ಪಾದನೆಯನ್ನು  ಕಡಿಮೆ ಗೊಳಿಸಲು ಸಾರ್ವಜನಿಕರು ಕೈಗೊಳ್ಳ ಬೇಕಾದ ಕ್ರಮಗಳನ್ನು ಹಾಗೂ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು ಮತ್ತು ಅದರ ನಿಯಂತ್ರಣ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಪಾಂಚಜನ್ಯ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಸಾಲಿಗ್ರಾಮ ಪ.ಪಂ.ನ ಆರೋಗ್ಯ ನಿರೀಕ್ಷಕಿ ಮಮತಾ, ಸ್ಯಾನಿಟರಿ ಸೂಪರ್‌ವೈಸರ್ ಶಿವರಾಜ್, ಪಪಂನ ಸಿಬ್ಬಂದಿ ಹಾಗೂ ಪಾಂಚಜನ್ಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Similar News